ಕಾರ್ಕಳ ತಾಲೂಕು ಮಟ್ಟದ ಕಬ್ಬಡಿ ಪಂದ್ಯಾಟ

ಮುನಿಯಾಲು ಬಾಲಕರ ತಂಡ – ನಿಟ್ಟೆಯ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ : ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ ಸೆ. 2 ರಂದು ಮಾಳ ಕೂಡುಬೆಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಜರುಗಿತು. ಮಾಳ ಗ್ರಾ. ಪಂ. ಅಧ್ಯಕ್ಷ ಉಮೇಶ್ ಪೂಜಾರಿ ದೀಪ ಬೆಳಗಿಸಿ ಪಂದ್ಯಾಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ದೈಹಿಕ ಸದೃಢತೆಯೊಂದಿಗೆ ಮಾನಸಿಕ ನೆಮ್ಮದಿಗೆ ಕ್ರೀಡೆ ಸಹಕಾರಿ. ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಸಮಚಿತ್ತವಾಗಿ ಸ್ವೀಕರಿಸಿ ಎಂದು ಶುಭಹಾರೈಸಿದರು.

ಗ್ರಾ. ಪಂ. ಉಪಾಧ್ಯಕ್ಷೆ ವಿಮಲಾ ಪೂಜಾರಿ, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ್ ಭಟ್, ಉಪಾಧ್ಯಕ್ಷೆ ಸುನೀತಾ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರವಿಚಂದ್ರ ಕಾರಂತ್, ಮುಖ್ಯ ಶಿಕ್ಷಕಿ ಪ್ರಭಾವತಿ, ಮಾಳ ಕೆರ್ವಾಶೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎಸ್. ಪೂಜಾರಿ, ಶಿಕ್ಷಕ ಕೃಷ್ಣ ಮೊಯ್ಲಿ, ಮಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ಹೆಗ್ಡೆ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಶಾಂತಾರಾಮ‌ ಮೆಹೆಂದಳೆ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಶಿಕ್ಷಕರಾದ ಪ್ರಭಾವತಿ ಸ್ವಾಗತಿಸಿ, ರಾಧಾಕೃಷ್ಣ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಹೇಮಾ ವಂದಿಸಿದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕರಾದ ಸ್ಟೆಫಿ ಶೈನಿ ಫೆರ್ನಾಂಡಿಸ್ ವಿಜೇತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ರಾಧಾಕೃಷ್ಣ ಜೋಶಿ ಕಾರ್ಯಕ್ರಮ ನಿರೂಪಿಸಿ, ಹರಿಣಿ ವಂದಿಸಿದರು.

ವಿಜೇತರು
ಬಾಲಕರ ವಿಭಾಗದಲ್ಲಿ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ ತಂಡ ಪ್ರಥಮ ಸ್ಥಾನ, ಮಾಳ ಗುರುಕುಲ ಶಾಲೆಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ ಪಡೆದುಕೊಂಡರೆ, ಬಾಲಕಿಯರ ವಿಭಾಗದಲ್ಲಿ ನಿಟ್ಟೆ ಪ್ರಾಥಮಿಕ ಶಾಲೆಯ ತಂಡ ಪ್ರಥಮ ಹಾಗೂ ಪೆರ್ವಾಜೆ ಪ್ರಾಥಮಿಕ ಶಾಲಾ ತಂಡ ದ್ವಿತೀಯ ಸ್ಥಾನ ತಮ್ಮದಾಗಿಸಿಕೊಂಡಿದೆ. ಪ್ರಥಮ ಸ್ಥಾನ ಪಡೆದ ತಂಡಗಳು ಸೆ. 9 ರಂದು ಬ್ರಹ್ಮಾವರ ಬೆಳ್ಳಾರ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ಪ್ರಥಮ ಸ್ಥಾನ ಪಡೆದ ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ತಂಡ
ದ್ವಿತೀಯ ಸ್ಥಾನ ಪಡೆದ ಮಾಳ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡ.
ಕಬಡ್ಡಿ ತರಬೇತುದಾರೆ ವಚನ ಹಾಗೂ ಅವರ ತಂಡ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.












































































































































































error: Content is protected !!
Scroll to Top