ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತೀವ್ರ ಆಕ್ರೋಶ
ಚೆನ್ನೈ : ಸನಾತನ ಧರ್ಮ ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗೆ ಸಮ ಎನ್ನುವ ಮೂಲಕ ತಮಿಳುನಾಡು ಸಚಿವ ಮತ್ತು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಃಇಂದು ಧರ್ಮವನ್ನು ಅವಮಾನಿಸಿದ್ದಾರೆ.
ಲೇಖಕರ ಸಮಾವೇಶದಲ್ಲಿ ಮಾತನಾಡಿದ ಸ್ಟಾಲಿನ್ ಸನಾತನ ಧರ್ಮ ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ. ಆ ಧರ್ಮವನ್ನು ನಿರ್ಮೂಲನೆ ಮಾಡಬೇಕು. ಸನಾತನ ಧರ್ಮವನ್ನು ಸರಳವಾಗಿ ವಿರೋಧಿಸಲು ಸಾಧ್ಯವಿಲ್ಲ. ಆದರೆ ಅದನ್ನು ನಿರ್ಮೂಲನೆ ಮಾಡಲೇಬೇಕು ಎಂದು ಹೇಳಿದ್ದಾರೆ.
ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದು, ತಮಿಳುನಾಡು ಸಚಿವ ಉದಯನಿಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಹಲವರು ಕರೆ ನೀಡಿದ್ದಾರೆ.
ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್ ಎಂದು ಮಾತನಾಡುತ್ತಾರೆ. ಆದರೆ ಕಾಂಗ್ರೆಸ್ ಮಿತ್ರ ಪಕ್ಷವಾದ ಡಿಎಂಕೆಯ ನಾಯಕ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಈ ವಿಚಾರದಲ್ಲಿ ಕಾಂಗ್ರೆಸ್‌ನ ಮೌನವು ಪರೋಕ್ಷವಾಗಿ ಸ್ಟಾಲಿನ್ ಹೇಳಿಕೆಯನ್ನು ಬೆಂಬಲಿಸುವಂತಿದೆ ಎಂದು ಬಿಜೆಪಿಯ ಅಮಿತ್ ಮಾಳವಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉದಯನಿಧಿ ಸ್ಟಾಲಿನ್ ಮತ್ತು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಕ್ರೈಸ್ತ ಮಿಷನರಿಗಳ ಪ್ರತಿನಿಧಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆರೋಪಿಸಿದ್ದಾರೆ.
ಗೋಪಾಲಪುರಂ ಕುಟುಂಬದ ಏಕೈಕ ಸಂಕಲ್ಪವೆಂದರೆ ರಾಜ್ಯದ ಜಿಡಿಪಿಯನ್ನು ಮೀರಿ ಸಂಪತ್ತನ್ನು ಸಂಗ್ರಹಿಸುವುದು. ತಿರು ಉದಯನಿಧಿ ಸ್ಟಾಲಿನ್, ಕ್ರೈಸ್ತ ಮಿಷನರಿಗಳ ಮುಖವಾಣಿಯಾಗಿದ್ದೀರಿ. ರಾಜ್ಯದಲ್ಲಿ ಆ ಮಿಷನರಿಗಳ ಆಲೋಚನೆಯನ್ನು ಬೆಳೆಸುವುದು ನಿಮ್ಮ ಉದ್ದೇಶ ಎಂದು ಅಣ್ಣಾಮಲೈ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.