ಆನೆಗುಂದಿ ಮಹಾಸಂಸ್ಥಾನ ಪಂಚ ಸಿಂಹಾಸನ ಸರಸ್ವತಿ ಪೀಠ ವಿಕಾಸ ಸಮಿತಿ ಅಧ್ಯಕ್ಷರಾಗಿ ದಿನೇಶ್ ಆಚಾರ್ಯ

ಕಾರ್ಕಳ : ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಪಂಚ ಸಿಂಹಾಸನ ಸರಸ್ವತಿ ಪೀಠ ವಿಕಾಸ ಸಮಿತಿ ಅಧ್ಯಕ್ಷರಾಗಿ ದಿನೇಶ್ ಆಚಾರ್ಯ ಪಡುಬಿದ್ರಿ ಅವರು ಆಯ್ಕೆಯಾಗಿದ್ದಾರೆ. ಪಡುಕುತ್ಯಾರಿನ ಆನೆಗುಂದಿ ಮಹಾ ಸಂಸ್ಥಾನದಲ್ಲಿ ಸಮಿತಿ ಗೌರವಾಧ್ಯಕ್ಷರಾದ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮಿಜಿಯವರ ಉಪಸ್ಥಿತಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಮತ್ತು ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆ ನಡೆಯಿತು.

ಸಮಿತಿ ಉಪಾಧ್ಯಕ್ಷರಾಗಿ ಎಸ್. ವಿ. ವೇಣುಗೋಪಾಲ ಆಚಾರ್ಯ ಬೆಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ಜೆ. ಮಂಜುನಾಥ ಅಂಬಣ್ಣ ಗಂಗಾವತಿ, ಕೋಶಾಧಿಕಾರಿಯಾಗಿ ಬ್ರಹ್ಮಶ್ರೀ ವೇದಮೂರ್ತಿ ಸುಬ್ಬಣ್ಣ ಆಚಾರ್ಯ ಗಿಣಿಗೇರಿ, ಕಾರ್ಯದರ್ಶಿಯಾಗಿ ಮಂಜುನಾಥ ವಾಸಪ್ಪ ಬನ್ನಿಕೊಪ್ಪ, ಸಹ ಕಾರ್ಯದರ್ಶಿಯಾಗಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಆಡಳಿತ ಮಂಡಳಿ ಸದಸ್ಯರಾಗಿ ಹರಿಶ್ಚಂದ್ರ ಎನ್. ಆಚಾರ್ಯ ಬೆಂಗಳೂರು, ಬಿ. ಸೂರ್ಯಕುಮಾರ್ ಹಳೆಯಂಗಡಿ, ಎಂ. ಪೃಥ್ವಿರಾಜ್ ಕಿನ್ನಿಗೋಳಿ, ಕೆ. ನಾಗೇಶ್ ಕುಮಾರ್ ಗಂಗಾವತಿ, ವಿ. ಶ್ರೀಧರ ಆಚಾರ್ಯ ವಡೇರ ಹೋಬಳಿ, ಲೋಕೇಶ್ ಎಂ. ಬಿ. ಆಚಾರ್ ಕಂಬಾರು, ಶಿಲ್ಪಿ ಸುರೇಶ್ ಆಚಾರ್ಯ ಹೊಸಪೇಟೆ, ಶಿಲ್ಪಿ ನಾಗರಾಜ ಆಚಾರ್ಯ ಹೊಸಪೇಟೆ, ಶಿಲ್ಪಿ ರಾಘವೇಂದ್ರ ಆಚಾರ್ಯ ಗದಗ ಆಯ್ಕೆಗೊಂಡರು. ಸಭೆಯ ಅಧ್ಯಕ್ಷತೆಯನ್ನು ಹರಿಶ್ಚಂದ್ರ ಎನ್ ಆಚಾರ್ಯ ಬೆಂಗಳೂರು ವಹಿಸಿದ್ದರು. ಲೋಕೇಶ್ ಎಂ. ಬಿ. ಆಚಾರ್ ಕಂಬಾರು ಕಾರ್ಯಕ್ರಮ ನಿರ್ವಹಿಸಿದರು.

error: Content is protected !!
Scroll to Top