ಕಾರ್ಕಳ : ಬೋಳಕೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ ಸೆ. 4 ರಂದು ಮೃತ್ಯುಂಜಯ ರುದ್ರ ಸೋಮನಾಥೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿತು. ವಿಸ್ತರಣಾಧಿಕಾರಿ ಶಿವಕುಮಾರ್ ಒಕ್ಕೂಟದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಬಿ. ಸದಾಶಿವ ಶೆಟ್ಟಿ ಸಂಘದ ಕಾರ್ಯವೈಖರಿಗಳ ಕುರಿತು ವಿವರಿಸಿದರು. ಸಂಘದ ಸದಸ್ಯರು, ಗ್ರಾಹಕರು ಸಭೆಯಲ್ಲಿ ಭಾಗವಹಿಸಿದ್ದರು. ರಘುವೀರ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಮಮತಾ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಪೂಜಾರಿ ವಂದಿಸಿದರು.
ಬೋಳಕೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ
