ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಬಜಗೋಳಿ ವಲಯ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಇರ್ವತ್ತೂರು ಶಾಲೆ ಮತ್ತು ತ್ರೋಬಾಲ್ ಪಂದ್ಯಾಟ ಶಿರ್ಲಾಲು ಸೂಡಿ ಶಾಲೆಯಲ್ಲಿ ನಡೆದಿದ್ದು ಇರ್ವತ್ತೂರು ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ನಾಲ್ಕು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಶುಭ ಹಾರೈಸಿದ್ದಾರೆ.
