ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ – ಕೇಮಾರು ಶ್ರೀ

ಕಾರ್ಕಳ : ಸನಾತನ ಸಂಸ್ಕೃತಿ ಹಾಗೂ ಧರ್ಮದ ರಕ್ಷಣೆಗಾಗಿ ಲಕ್ಷೋಪಲಕ್ಷ ಸಾಧು ಸಂತರು ತಪಸ್ಸಿನ ಮೂಲಕ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಹೀಗಿರುವಾಗ ಇಂತಹ ಪವಿತ್ರ ಧರ್ಮವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಮಠದ ಸ್ವಾಮೀಜಿ ಶ್ರೀ ಈಶ ವಿಠಲದಾಸ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಸನಾತನ ಧರ್ಮದ ಬಗ್ಗೆ ಇತ್ತೀಚೆಗೆ ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು. ಸನಾತನ ಪರಂಪರೆ, ಸಂಸ್ಕೃತಿಯನ್ನು ವಿಶ್ವದ ಎಲ್ಲೆಡೆ ಪಸರಿಸುವ ಕೆಲಸವನ್ನು ನಮ್ಮ ಸಾಧು ಸಂತರು ಮಾಡಿದ್ದಾರೆ. ಈ ಮಣ್ಣಿನ ಮೂಲ ಧರ್ಮ, ಸಂಸ್ಕೃತಿ, ಜೀವನ ವಿಧಾನವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಬಾಲ್ಯದಿಂದಲೇ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಕಲಿಸಬೇಕು. ಹಾಗಾದಲ್ಲಿ ಮಾತ್ರ ಸುಸಂಸ್ಕೃತ ಸಮಾಜ ನಿರ್ಮಾಣವಾಗಲು ಸಾಧ್ಯ. ಸನಾತನ ಧರ್ಮ ನೈತಿಕತೆಯನ್ನು ಬೋಧಿಸುತ್ತದೆ. ಉದಯ ನಿಧಿ ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ಅವರ ಮಾನಸಿಕತೆಯನ್ನು ತೋರಿಸುತ್ತದೆ ಎಂದು ಸ್ವಾಮೀಜಿ ಹೇಳಿದ್ದಾರೆ.

error: Content is protected !!
Scroll to Top