ಮಂಗಳೂರು: ಆಟವಾಡಿ ಮನೆಗೆ ಹಿಂತಿರುಗುತ್ತಿದ್ದ ಯುವಕನೋರ್ವನಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಳವಾರು ಎಂಬಲ್ಲಿ ರವಿವಾರ ಸಂಜೆ ಸಭವಿಸಿದೆ.
ಬಜ್ಪೆ ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್(23) ಇರಿತಕ್ಕೊಳಗಾಗಿ ಗಾಯಗೊಂಡ ಯುವಕ. ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇರಿತದ ಪರಿಣಾಮ ಅಫ್ವಾನ್‌ನ ಕೈ, ಕುತ್ತಿಗೆಗೆ ಗಾಯಗಳಾಗಿವೆ. ಗಾಯಾಳುವನ್ನು ಬಜ್ಪೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಸ್ಥಳೀಯನೇ ಆಗಿರುವ ಯುವಕ ಚೂರಿಯಿಂದ ಇರಿದಿದ್ದಾನೆ ಎನ್ನಲಾಗಿದೆ. ಕೆಲದಿನಗಳಿಂದ ಕಳವಾರು ಭಾಗದಲ್ಲಿ ಮದ್ಯ ವ್ಯಸನಿಯೊಬ್ಬ ಹಲ್ಲೆ ನಡೆಸಿದ್ದ ಪ್ರಕರಣ ದಾಖಲಾಗಿತ್ತು. ಇದೇ ಹಿನ್ನೆಲೆಯಲ್ಲಿ ಚೂರಿ ಇರಿತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವಕನ ಮೇಲೆ ಚೂರಿಯಿಂದ ಹಲ್ಲೆ
