ಕಾರ್ಕಳ : ಮಾಳದ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೋಮವಾರ ಆಚರಿಸಲಾಯಿತು. ಶಾಲೆಯಲ್ಲಿ 33 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ರೋಸಿ ಇವರನ್ನು ಶಿಕ್ಷಕ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಸಂಚಾಲಕರು ಹಾಗೂ ಶಿಕ್ಷಕರು ಸೇರಿ ಗೌರವಿಸಿದರು.
ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಹಲವಾರು ಸ್ಪರ್ಧೆಗಳನ್ನು ವಿದ್ಯಾರ್ಥಿಗಳು ನಡೆಸಿದ್ದು ವಿಜೇತರಿಗೆ ಬಹುಮಾನ ನೀಡಲಾಯಿತು. ನಂತರ ವಿದ್ಯಾರ್ಥಿಗಳು ಶಿಕ್ಷಕ ದಿನಾಚರಣೆಯ ಬಗ್ಗೆ ತಮ್ಮ ಅನಿಸಿಕೆಗಳನ್ನು ತಿಳಿಸಿದರು. ಶಿಕ್ಷಕರಿಂದ ಸಾಂಸ್ಕೃತಿಕ ಚಟುವಟಿಕೆ ನಡೆಯಿತು ವಿದ್ಯಾರ್ಥಿ ಮನ್ವಿತ್ ನಿರೂಪಿಸಿದರು.
ಮಾಳ : ಗುರುಕುಲ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ
