ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದ ಇಂಡಿಗೊ ವಿಮಾನ
ಬೆಂಗಳೂರು: ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ಪ್ರಯಾಣಿಕನನ್ನು ಬಂಧಿಸಲಾಗಿದೆ.
ಜಿ. ಕರುಣಾಕರನ್ ಎಂಬ ಪ್ರಯಾಣಿಕ ಸೆ.3ರ ರಾತ್ರಿ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ್ದ. ಟೇಕ್‌ಆಫ್ ಆದ ಸ್ವಲ್ಪ ಸಮಯದ ನಂತರ ವಿಮಾನದ ಹಿಂಭಾಗದಲ್ಲಿ ಸುಡುವ ವಾಸನೆ ಬರುತ್ತಿರುವುದನ್ನು ಪ್ರಯಾಣಿಕರು ಗಮನಿಸಿದ್ದಾರೆ.
ವಾಸನೆ ಶೌಚಾಲಯದಿಂದ ಹೊರಗಿನಿಂದ ಬರುತ್ತಿತ್ತು. ಬಾಗಿಲು ತಟ್ಟಿದಾಗ ಒಳಗಿದ್ದ ಕರುಣಾಕರನ್ ಕೈಯಲ್ಲಿ ಬೆಂಕಿಪೊಟ್ಟಣ ಇತ್ತು. ಆತ ಶೌಚಾಲಯದೊಳಗೆ ಬೀಡಿ ಸೇದಿ ತುಂಡನ್ನು ಫ್ಲಶ್ ಮಾಡುವ ಪ್ರಯತ್ನ ಮಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಫ್ಲೈಟ್ ಕ್ಯಾಪ್ಟನ್‌ಗೆ ಮಾಹಿತಿ ನೀಡಿದ್ದಾರೆ. ವಿಮಾನ ಬೆಂಗಳೂರು ಕೂಡಲೇ ವ್ಯಕ್ತಿಯನ್ನು ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ನಂತರ ಪೊಲೀಸರು ಆತನನ್ನು ಬಂಧಿಸಿದರು.