ಎಸ್ಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ಬಾರಿ ಪರೀಕ್ಷೆಗೆ ಅವಕಾಶ – ಮಧು ಬಂಗಾರಪ್ಪ

ಬೆಂಗಳೂರು : ಎಸ್ಸೆಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರಕಾರ ನಿರ್ಧರಿಸಿದೆ. ವಿಧಾನಸೌಧದಲ್ಲಿ ಇಂದು ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಘೋಷಣೆ ಮಾಡಿದರು. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು, ಕೆಲ ವಿಷಯಗಳಲ್ಲಿ ಫೇಲ್ ಆದರೂ ಮುಂದಿನ ತರಗತಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.

2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್ಸೆಸೆಲ್ಸಿ ಮತ್ತು ಪಿಯು ವಿದ್ಯಾರ್ಥಿಗಳು ವರ್ಷಕ್ಕೆ 3 ಬಾರಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು, ಫೇಲ್​​​ ಅಥವಾ ಕಡಿಮೆ ಅಂಕ ಬಂದವರು 3 ಬಾರಿ ಪರೀಕ್ಷೆ ಬರೆಯಬಹುದು ಎಂದು ಹೇಳಿದರು.

ವೇಳಾಪಟ್ಟಿ ಇಂತಿದೆ :
ಎಸ್ಸೆಸೆಲ್ಸಿ
ಪರೀಕ್ಷೆ-1 ಮಾರ್ಚ್​ 30ರಿಂದ ಏಪ್ರಿಲ್​ 15ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-2 ಜೂನ್​ 12ರಿಂದ ಜೂನ್​ 19ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-3 ಜುಲೈ 29ರಿಂದ ಆಗಸ್ಟ್​ 5ರವರೆಗೆ ನಡೆಸಲು ನಿರ್ಧಾರ

ಪಿಯುಸಿ
ಪರೀಕ್ಷೆ-1 ಮಾರ್ಚ್​​ 1ರಿಂದ ಮಾರ್ಚ್​ 25ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-2 ಮೇ 15ರಿಂದ ಜೂನ್​ 5ರವರೆಗೆ ನಡೆಸಲು ನಿರ್ಧಾರ
ಪರೀಕ್ಷೆ-3 ಜುಲೈ 12ರಿಂದ ಜುಲೈ 30ರವರೆಗೆ ನಡೆಸಲು ನಿರ್ಧಾರ































































































































































error: Content is protected !!
Scroll to Top