ಕಾರ್ಕಳ : ರಾಯಚೂರಿನ ಕಲಾ ಸಂಕುಲ ಸಂಸ್ಥೆ ಕೊಡಮಾಡುವ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿಗೆ ಕಾರ್ಕಳ ಜೇಸಿ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ವಂದನಾ ರೈ ಅವರು ಭಾಜನರಾಗಿದ್ದಾರೆ. ಸೆ. 10 ರಂದು ಬೆಳಿಗ್ಗೆ 10 ಗಂಟೆಗೆ ರಾಯಚೂರು ನಗರದ ವೀರಶೈವ ಕಲ್ಯಾಣಮಂಟಪದಲ್ಲಿ ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜೇಸಿ ಶಾಲೆಯ ವಂದನಾ ರೈ ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ
