ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಮಲ್ಪೆಯ ಯುವಕ ಆತ್ಮಹತ್ಯೆ

ಉಡುಪಿ : ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಮಲ್ಪೆ ಸಮೀಪದ ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 5 ರಂದು ನಡೆದಿದೆ. ಮನೆಯ ಕೊಠಡಿಯಲ್ಲಿ ನೇಣು ಬಿಗಿದು ವಿರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿ ಹಲವು ಪದಕಗಳನ್ನು ವಿರಾಜ್‌ ಮೆಂಡನ್ ತಮ್ಮದಾಗಿಸಿಕೊಂಡಿದ್ದರೂ, ಮೂಲ ವೃತ್ತಿಯಾಗಿ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

error: Content is protected !!
Scroll to Top