ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ತೀಕ್ಷ್ಣ ಟೀಕೆ
ಚೆನ್ನೈ: ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ಹೇಳಿರುವ ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಪುತ್ರ ಯುವಜನ ಮತ್ತು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ದಕ್ಷಿಣ ಭಾರತದ ಪಪ್ಪು ಎಂದು ಬಿಜೆಪಿ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಲೇವಡಿ ಮಾಡಿದ್ದಾರೆ.
ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಖಂಡಿಸಿರುವ ಅಣ್ಣಾಮಲೈ ಸಾಮಾಜಿಕ ಜಾಲತಾಣದಲ್ಲಿ ಉದಯನಿಧಿ ಸ್ಟಾಲಿನ್ ಅವರನ್ನು ದಕ್ಷಿಣದ ಪಪ್ಪು ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿ, ಮೋದಿಯವರ ಸಮುದಾಯದ ಬಗ್ಗೆ ಮಾತನಾಡಿದಂತೆ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಮಾತನಾಡಿದ್ದಾರೆ. ರಾಹುಲ್ ಗಾಂಧಿ ಉತ್ತರ ಭಾರತದ ಪಪ್ಪು ಆದರೆ ದಕ್ಷಿಣ ಭಾರತದ ಪಪ್ಪು ಉದಯನಿಧಿ ಸ್ಟಾಲಿನ್ ಎಂದು ಅಣ್ಣಾಮಲೈ ಟೀಕಿಸಿದ್ದಾರೆ.
ಅವರು ಹೀಗೆ ಮಾತನಾಡುತ್ತಾ ಹೋದರೆ ‘I.N.D.I.A’ ಮೈತ್ರಿಕೂಟದ ಮತಬ್ಯಾಂಕ್ ಕುಸಿಯುತ್ತಲೇ ಹೋಗುತ್ತದೆ. ಈಗ ‘I.N.D.I.A’ ಮೈತ್ರಿಕೂಟದ ಮತಗಳ ಪ್ರಮಾಣ ಶೇ.5ಕ್ಕೆ ಇಳಿದಿದೆ. ಉದಯನಿಧಿ ಹೀಗೆಯೇ ಮುಂದುವರಿದರೆ, ‘I.N.D.I.A’ ಮೈತ್ರಿಕೂಟದ ಮತಗಳು ಶೇ.20 ರಷ್ಟು ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.