ಉದಯನಿಧಿ ಸ್ಟಾಲಿನ್‌, ಪ್ರಿಯಾಂಕ್‌ ಖರ್ಗೆ ವಿರುದ್ಧ ಕೇಸ್‌ ದಾಖಲು

ಸನಾತನ ಧರ್ಮ ಅವಹೇಳನ ಪ್ರಕರಣ

ಹೊಸದಿಲ್ಲಿ : ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಕ್ಕೆ ಹೋಲಿಸಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಮತ್ತು ಅದನ್ನು ಸಮರ್ಥಿಸಿಕೊಂಡ ರಾಜ್ಯದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣ ದಾಖಲಿಸಲಾಗಿದೆ.
ಸನಾತನ ಧರ್ಮವನ್ನು ರೋಗಗಳಿಗೆ ಹೋಲಿಸಿದ ಉದಯನಿಧಿ ಸ್ಟಾಲಿನ್ ರೋಗಗಳಂತೆ ಸನಾತನ ಧರ್ಮವನ್ನು ನಾಶ ಮಾಡಬೇಕೆಂದು ಹೇಳಿದ್ದರು. ಅವರ ಹೇಳಿಕೆಯನ್ನು ಪ್ರಿಯಾಂಕ್‌ ಖರ್ಗೆ ಬಲವಾಗಿ ಬೆಂಬಲಿಸಿದ್ದರು.
ಘಟನೆಗೆ ಸಂಬಂಧಿಸಿ ಉತ್ತರ ಪ್ರದೇಶದ ರಾಂಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಐಪಿಸಿಯ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು 153 ಎ (ವಿವಿಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಕೀಲರಾದ ಹರ್ಷಗುಪ್ತಾ ಮತ್ತು ರಾಮ್ ಸಿಂಗ್ ಲೋಧಿ ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ, ಅವರ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಕೆ ಧಕ್ಕೆಯುಂಟಾಗಿದೆ ಎಂದು ದೂರು ದಾಖಲಾಗಿತ್ತು.
ಕಳೆದ ಶನಿವಾರ ತಮಿಳುನಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಹೋಲಿಕೆ ಮಾಡಿ ಮಾತನಾಡಿದ್ದು ಅಲ್ಲದೆ ಸನಾತನ ಧರ್ಮವನ್ನು ಬೇರು ಸಮೇತ ಕಿತ್ತು ಹಾಕಬೇಕು ಎಂದು ಹೇಳಿಕೆ ನೀಡಿದ್ದರು.









































































































































































error: Content is protected !!
Scroll to Top