ಹಾಸ್ಟೆಲ್‌ ಅವ್ಯವಸ್ಥೆ ಕಂಡು ಸಚಿವ ಕೆಂಡಾಮಂಡಲ : ಅಧಿಕಾರಿ ಸ್ಥಳದಲ್ಲೇ ಸಸ್ಪೆಂಡ್‌

ದಿಢೀರ್‌ ಮಂಗಳೂರಿನ ಹಾಸ್ಟೆಲ್‌ಗೆ ಭೇಟಿ ನೀಡಿದ ಸಚಿವ ಜಮೀರ್‌

ಮಂಗಳೂರು : ಜಿಲ್ಲಾ ಪ್ರವಾಸ ಕೈಗೊಂಡಿರುವ ವಸತಿ, ವಕ್ಫ್‌ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ನಿನ್ನೆ ದಿಢೀರ್ ಸರಕಾರಿ ಹಾಸ್ಟೆಲ್‌ಗೆ ಭೇಟಿ ನೀಡಿದಾಗ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲವಾದರು.
ಮಂಗಳವಾರ ಸಂಜೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಜತೆಗೆ ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್‌ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿದೆ.
ಹಾಸ್ಟೆಲ್‌ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಚಿಕನ್ ನೀಡದೆ ಹದಿನೈದು ದಿನಕ್ಕೆ ಚಿಕನ್ ನೀಡಲಾಗುತ್ತಿದೆ. ಚಾರ್ಟ್ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. ಐದು ವರ್ಷ ಆದರೂ ಬೆಡ್ ಶೀಟ್ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲಿ ಆರೋಪಿಸಿದರು.
ತಕ್ಷಣ ಸಚಿವರು ತಾಲೂಕು ವಿಸ್ತರಣಾ ಅಧಿಕಾರಿ ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದರು.ಡಿ.ಎಂ.ಒ ಜಿನೇಂದ್ರ ಹಾಗೂ ವಾರ್ಡನ್ ಅಶೋಕ್‌ಗೆ ಶೋಕಾಸ್ ನೋಟಿಸ್ ನೀಡಲು ಸೂಚಿಸಿದರು.

error: Content is protected !!
Scroll to Top