ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕಾರ್ಕಳ : ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಸೆ. 5 ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರುಗಿತು. ವಿದ್ಯಾರ್ಥಿಗಳು ಉಪನ್ಯಾಸಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಿ ಗುರುವಂದನೆ ಸಲ್ಲಿಸಿದರು. ವಿದ್ಯಾರ್ಥಿನಿಯರಾದ ಸೌಮ್ಯ ಆಚಾರ್ಯ, ಸೋನಿಯಾ ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಜಗದೀಶ್ ನಾಯಕ್ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿವರಿಸುತ್ತಾ, ಶಿಕ್ಷಕರಾದವರು ಮಾನವೀಯ ಮೌಲ್ಯಗಳಿಂದ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು. ಅಂತೆಯೇ ವಿದ್ಯಾರ್ಥಿಗಳು ಗುರುವಿಗೆ ವಿಧೇಯರಾಗಿದ್ದಾಗ ಮಾತ್ರ ಪಡೆದ ವಿದ್ಯೆ ಸಾರ್ಥಕವಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ವೃಂದ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಪ್ರಣತಿ ಹಾಗೂ ಅನುಷಾ ಪ್ರಾರ್ಥಿಸಿದರು. ಸಂಪ್ರೀತ ಸ್ವಾಗತಿಸಿ, ಸೌಮ್ಯ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಸಮೀಕ್ಷಾ ವಂದಿಸಿದರು.error: Content is protected !!
Scroll to Top