ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್ : ಓರ್ವ ವಿದ್ಯಾರ್ಥಿನಿ ಸಾವು

ಚಿಕ್ಕಮಗಳೂರು : ಶಾಲಾ-ಕಾಲೇಜುಗಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಧಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ.

ಕಾವಲ್ ದುಗ್ಲಾಪುರ ಗೇಟ್‌ ಮಾರ್ಗವಾಗಿ ಅತಿ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಘಟನೆಯಲ್ಲಿ ತುಳಸಿ (15) ಮೃತಪಟ್ಟಿದ್ದಾಳೆ. ಇನ್ನು ನಿವೇದಿತ (14) ಗಂಭೀರ ಗಾಯಗೊಂಡಿದ್ದು, ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಕೊನೆಯಲ್ಲಿ ಬಸ್‌ ಮನೆಯೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಮೇಲ್ಚಾವಣಿ ಸಂಪೂರ್ಣ ಜಖಂಗೊಂಡಿದೆ. ಗಂಭೀರ ಗಾಯಗೊಂಡಿರುವ ಮಕ್ಕಳನ್ನು ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನಿಸಲಾಗಿದೆ.

ಅತಿ ಹೆಚ್ಚು ವೇಗದ ಖಾಸಗಿ ಬಸ್ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಈ ರೀತಿಯಾಗಿದೆ.error: Content is protected !!
Scroll to Top