ಉಡುಪಿ : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಉಡುಪಿ ಜಿಲ್ಲೆಯ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾಗಡಿ ನಿರ್ಣಯಿಸಿ ಪ್ರಕಟಣೆ ಹೊರಡಿಸಿದೆ. ಈ ವಿವರಗಳನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಬಗ್ಗೆ ಯಾವುದಾದರೂ ಸಾರ್ವಜನಿಕ ಅಭಿಪ್ರಾಯ, ಆಕ್ಷೇಪಣೆಗಳಿದ್ದಲ್ಲಿ ಆನ್ ಲೈನ್ ಮುಖಾಂತರ ಆಯೋಗದ ವೆಬ್ ಸೈಟ್ ನಲ್ಲಿ ಮತ್ತು ಅಂಚೆಯ ಮೂಲಕ ಬೆಂಗಳೂರಿನ ಆಯೋಗದ ಕಚೇರಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ತಾಲೂಕು ಪಂಚಾಯತ್ ಸದಸ್ಯರ ಸಂಖ್ಯೆ ನಿಗದಿ – ಕ್ಷೇತ್ರಗಳ ಸೀಮಾಗಡಿ ನಿರ್ಣಯಿಸಿ ಕರಡು ಪ್ರಸ್ತಾವನೆ
