ಬೈಂದೂರಿಗೆ ಚಾಚಿದ ಆಪರೇಷನ್‌ ಹಸ್ತ : ಸುಕುಮಾರ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ ಖಚಿತ

ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಮಾತುಕತೆ

ಉಡುಪಿ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ನಡೆಯುತ್ತಿರುವ ಆಪರೇಷನ್‌ ಹಸ್ತ ಬೈಂದೂರು ತನಕ ಚಾಚಿದೆ. ಬೈಂದೂರಿನ ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿಯವರಿಗೆ ಡಿಕೆಶಿ ಗಾಳ ಹಾಕಿದ್ದು, ಶೆಟ್ಟರ ಕಾಂಗ್ರೆಸ್ ಸೇರ್ಪಡೆ ಬಹುತೇಕ ಖಚಿತವಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನಿರಾಕರಿಸಿದಾಗ ಬೇಸರಗೊಂಡಿದ್ದ ಸುಕುಮಾರ ಶೆಟ್ಟಿಯವರು ಪಕ್ಷದ ಚಟುವಟಿಕೆಯಿಂದ ಹೊರಗುಳಿದು ಚುನಾವಣೆ ಸಂದರ್ಭ ಕಾಂಗ್ರೆಸ್‌ಗೆ ಪರೋಕ್ಷ ಬೆಂಬಲ ನೀಡಿದ್ದರು.
ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಫೇಸ್ಬುಕ್ ಖಾತೆಯಲ್ಲಿ ಸುಕುಮಾರ ಶೆಟ್ಟರ ಕಾಂಗ್ರೆಸ್ ಸೇರ್ಪಡೆಯನ್ನು ಬಹುತೇಕ ಖಚಿತಗೊಳಿಸಿದ್ದಾರೆ. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹಾಗೂ ಸುಕುಮಾರ ಶೆಟ್ಟಿ ಜತೆಯಾಗಿ ಡಿಕೆಶಿ ಜತೆ ನಿಂತುಕೊಂಡಿರುವ ಫೋಟೋ ಆಗಿದೆ. ಇದು ನಿನ್ನೆ ಬೆಂಗಳೂರಿನಲ್ಲಿ ಭೇಟಿಯಾದ ತೆಗೆದ ಫೋಟೊ.
ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜೀ ಶಾಸಕ ಬಿ.ಎಂ.ಎಸ್., ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮೊದಲ ಸುತ್ತಿನ ಮಾತುಕತೆ ನಡೆದಿದ್ದು ಸೇರ್ಪಡೆಗೆ ದಿನ ನಿಗದಿಯಾಗಿಲ್ಲ ಎಂದಿದ್ದಾರೆ.

error: Content is protected !!
Scroll to Top