ಹೆಬ್ರಿ : ಮುದ್ರಾಡಿ ಗ್ರಾಮದ ಬಲ್ಲಾಡಿ ಮಠದ ಶ್ರೀ ವಿಠ್ಠಲ ದೇವರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಒದಗಿಸಿದ 2 ಲಕ್ಷ ರೂ. ನೆರವಿನ ಚೆಕ್ಕನ್ನು ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿ. ಸಿ. ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ಮಠದ ಅರ್ಚಕ ನಾರಾಯಣ ಭಟ್ ಅವರಿಗೆ ಹಸ್ತಾಂತರಿಸಿದರು.
ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ನರಸಿಂಹ ಮಲ್ಯ ವರಂಗ, ಮುದ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ ಪೂಜಾರಿ, ಬಲ್ಲಾಡಿ ಎ ಮತ್ತು ಬಿ ಒಕ್ಕೂಟದ ಅಧ್ಯಕ್ಷರಾದದ ಹರೀಶ್ ಕುಲಾಲ್ ಮತ್ತು ಶ್ರೀನಾಥ್ ಶೆಟ್ಟಿಗಾರ್, ಮುದ್ರಾಡಿ ವಲಯ ನಿಕಟಪೂರ್ವ ಅಧ್ಯಕ್ಷ ಸುಧಾಕರ ಶೆಟ್ಟಿ ಮತ್ತು ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಮಮತಾ ಸ್ವಾಗತಿಸಿ, ಬಲ್ಲಾಡಿ ಚಂದ್ರಶೇಖರ ಭಟ್ ವಂದಿಸಿದರು.
ಬಲ್ಲಾಡಿ ಮಠಕ್ಕೆ ಆರ್ಥಿಕ ದೇಣಿಗೆ ಹಸ್ತಾಂತರ
