ಮುದ್ರಾಡಿ ಪ್ರಾಥಮಿಕ ಶಾಲೆಯಲ್ಲಿ ಜನ್ಮಾಷ್ಟಮಿ ಆಚರಣೆ

ಹೆಬ್ರಿ : ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷ ಶುಭಧರ ಶೆಟ್ಟಿ ಮುದ್ರಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಎಲ್.ಕೆ.ಜಿ ಮತ್ತು ಯು.ಕೆ.ಜಿ ವಿದ್ಯಾರ್ಥಿಗಳಿಗೆ ಶ್ರೀ ಕೃಷ್ಣ ಮತ್ತು ರಾಧೆಯ ವೇಷ ಸ್ಪರ್ಧೆ ನಡೆಯಿತು.
ವಿಜೇತರಾದ ಮತ್ತು ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಶಾಲಾ ಮುಖ್ಯಶಿಕ್ಷಕ ಶ್ರೀನಿವಾಸ ಭಂಡಾರಿ, ಸಮೃದ್ಧಿಯ ಸುನಿಲ್ ಕುಮಾರ್, ಎಲ್.ಕೆ.ಜಿ., ಯು.ಕೆ.ಜಿ ಅಧ್ಯಕ್ಷರಾದ ಪ್ರೀತ ಶೆಟ್ಟಿ, ಶಿಕ್ಷಕಿಯರಾದ ತುಂಗಶ್ರೀ, ಜಯಪ್ರಭಾ ರೈ, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.error: Content is protected !!
Scroll to Top