ಇಬ್ಬರು ಉಗ್ರರು ಯೋಧರ ಗುಂಡಿಗೆ ಬಲಿ

ಗಡಿ ನುಸುಳಲು ಯತ್ನಿಸಿದ ಉಗ್ರರ ಜತೆ ಗುಂಡಿನ ಕಾಳಗ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನಾ ಪಡೆ ಬುಧವಾರ ಇಬ್ಬರು ಉಗ್ರರರನ್ನು ಹೊಡೆದುರುಳಿಸಿದೆ. ಯೋಧರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಒಬ್ಬ ಭಯೋತ್ಪಾದಕನ ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಎರಡನೆಯವನ ದೇಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಜಮ್ಮು ಮೂಲದ ರಕ್ಷಣಾ ಪಿಆರ್‌ಒ ಲೆ. ಕ.ಸುನೀಲ್ ಬರ್ತ್ವಾಲ್ ಹೇಳಿದ್ದಾರೆ. ಪೂಂಚ್‌ನ ಮಂಡಿ ಉಪ ವಲಯದಲ್ಲಿ ಮಂಗಳವಾರ ಮತ್ತು ಬುಧವಾರ ಇಬ್ಬರು ಭಯೋತ್ಪಾದಕರು ಎಲ್‌ಒಸಿ ದಾಟುತ್ತಿರುವುದನ್ನು ಗಮನಿಸಿದ ನಂತರ ಕಾರ್ಯಾಚರಣೆ ಪ್ರಾರಂಭಿಸಲಾಯಿತು ಎಂದು ಅವರು ತಿಳಿಸಿದ್ದಾರೆ.



































































































































































error: Content is protected !!
Scroll to Top