ಉಡುಪಿ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಅಧಿಕಾರ ಸ್ವೀಕಾರ

ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಅರುಣ್ ಅವರು ಸೆ. 7 ರಂದು ಅಧಿಕಾರ ವಹಿಸಿಕೊಂಡರು. ನಿರ್ಗಮನ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ನೂತನ ಎಸ್ಪಿಯನ್ನು ಸ್ವಾಗತಿಸಿ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಡಾ. ಕೆ. ಅರುಣ್, ಜಿಲ್ಲೆಯಲ್ಲಿ ನಡೆಯುವ ಯಾವುದೇ ರೀತಿಯ ಕೋಮು ಹಿಂಸಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು. ಅನೈತಿಕ ಪೊಲೀಸ್‌ ಗಿರಿಗೆ ಕಾನೂನಿನಲ್ಲಿ ಅವಕಾಶ ಇಲ್ಲ. ಮಣಿಪಾಲದಲ್ಲಿ ನಡೆಯುತ್ತಿರುವ ಪಬ್, ಡ್ರಗ್ಸ್ ಸೇರಿದಂತೆ ಎಲ್ಲ ರೀತಿಯ ಕಾನೂನು ವಿರೋಧಿ ಚಟುವಟಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸ್ ಇಲಾಖೆಯನ್ನು ಜನಸ್ನೇಹಿಯನ್ನಾಗಿ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದೆ ಎಂದರು.

error: Content is protected !!
Scroll to Top