ಹೆಬ್ರಿ : ಹೆಬ್ರಿ ಎಸ್. ಆರ್. ಪದವಿ ಪೂರ್ವ ಕಾಲೇಜಿನಲ್ಲಿ ಸೆ. 8 ರಂದು ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಸಾಧಕ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
ತ್ರೋಬಾಲ್ : ಅಮೃತ ಭಾರತಿಯ ಬಾಲಕ – ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ
