ಅಭಿವೃದ್ಧಿ ಕಡೆಗಣಿಸಿದೆ, ಆಡಳಿತ ವಿಫಲವಾಗಿದೆ ಎಂದು ಆರೋಪ
ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ವಿರುದ್ಧ ಇಂದು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಅಭಿವೃದ್ಧಿಯನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಬರಗಾಲ ಇದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಬಿಜೆಪಿ ಅವಧಿಯ ಕಾಮಗಾರಿಗಳನ್ನು ತಡೆಹಿಡಿದಿದೆ. ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಿ ದ್ವೇಷ ಸಾಧಿಸುತ್ತಿದ್ದಾರೆ ಎಂಬಿತ್ಯಾದಿ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪ್ರತಿಭಟನೆ ನಡೆಸಲಿದೆ.