ಬಿಜೆಪಿ ಅವಧಿಯ ಇನ್ನೊಂದು ಅಕ್ರಮ ತನಿಖೆಗೆ ನಿರ್ಧಾರ

ಶಾಲಾ ಮಕ್ಕಳ ಸಮವಸ್ತ್ರ ಪೂರೈಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ

ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಇನ್ನೊಂದು ಅಕ್ರಮದ ಬಗ್ಗೆ ತನಿಖೆ ನಡಡಸಲು ಕಾಂಗ್ರೆಸ್‌ ಸರಕಾರ ನಿರ್ಧರಿಸಿದೆ. ವಿದ್ಯಾವಿಕಾಸ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಕೇಂದ್ರೀಯ ಭಂಡಾರದಿಂದ ಕಳಪೆ ಸಮವಸ್ತ್ರ ಪೂರೈಕೆ ಮಾಡುವ ಮೂಲಕ ಕೋಟ್ಯಂತರ ರು. ಅಕ್ರಮ ನಡೆಸಿರುವ ಬಗ್ಗೆ ಇಲಾಖಾ ತನಿಖೆ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ತೆಗೆದುಕೊಂಡ ತೀರ್ಮಾ ಕೈಗೊಳ್ಳಲಾಗಿದೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ. 2020-21, 2021-2022 ಸಾಲಿನಲ್ಲಿ ವಿದ್ಯಾವಿಕಾಸ ಯೋಜನೆಯಡಿ ಒಂದರಿಂದ 10ನೇ ತರಗತಿವರೆಗಿನ ಗಂಡು ಮಕ್ಕಳಿಗೆ ಮತ್ತು ಒಂದರಿಂದ ಏಳನೇ ತರಗತಿವರೆಗಿನ ಹೆಣ್ಣು ಮಕ್ಕಳಿಗೆ ಸಮವಸ್ತ್ರ, ಎಂಟರಿಂದ 10ನೇ ತರಗತಿವರೆಗಿನ ಹೆಣ್ಣು ಮಕ್ಕಳಿಗೆ ಚೂಡಿದಾರ್‌ ಸೇರಿ ಎರಡು ಜತೆ ಸಮವಸ್ತ್ರಕ್ಕೆ ಒಟ್ಟು 1.34 ಕೋಟಿ ಮೀಟರ್‌ ಬಟ್ಟೆ ಪೂರೈಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ಕಾರ್ಯಾದೇಶ ನೀಡಿತ್ತು.
ಆದರೆ ನಿಗಮ ಪೂರೈಸಿದ ಬಟ್ಟೆ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು 2023ರ ಫೆ.21ರಂದು ಕೇಂದ್ರ ರೇಷ್ಮೆ ಮಂಡಳಿ ವರದಿ ನೀಡಿತ್ತು. ಒಟ್ಟು 144 ಕೋಟಿ ರೂ. ಮೊತ್ತಕ್ಕೆ ಕಾರ್ಯಾದೇಶ ನೀಡಲಾಗಿತ್ತು. ಕಳಪೆ ಗುಣಮಟ್ಟ ಎಂದು ವರದಿ ನೀಡಿದರೂ ಈ ಪೈಕಿ 117 ಕೋಟಿ ರೂ. ಪಾವತಿಸಲಾಗಿದೆ. ಕಳಪೆ ಗುಣಮಟ್ಟದ ಬಟ್ಟೆ ಪೂರೈಕೆದಾರರಿಗೆ ಶೇ.100 ರಷ್ಟು ಮೊತ್ತ ಪಾವತಿ ಮಾಡಲಾಗಿದೆ. ಈ ಬಗ್ಗೆ ವ್ಯಾಪಕ ಅಕ್ರಮ ನಡೆದಿರುವುದು ಸಾಬೀತಾಗಿದ್ದು, ಈಗಾಗಲೇ ವ್ಯವಸ್ಥಾಪಕ ನಿರ್ದೇಶಕರನ್ನು ಅಮಾನತುಗೊಳಿಸಲಾಗಿದೆ. ಹೀಗಾಗಿ ಈ ಹಗರಣದ ಹಿಂದೆ ಇನ್ನೂ ಯಾರಾರ‍ಯರಿದ್ದಾರೆ ಎಂಬ ಬಗ್ಗೆ ತನಿಖೆಗೆ ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.













































































































































































error: Content is protected !!
Scroll to Top