ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಬೆಳಗ್ಗೆ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ 11.25ಕ್ಕೆ ಸರ್ಕ್ಯೂಟ್ ಹೌಸ್‌ಗೆ ತೆರಳಿ ವಿಶ್ರಾಂತಿ ಪಡೆಯುತ್ತಾರೆ. ನಂತರ ಅಲ್ಲಿಂದ 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್‍ವೆನ್ಶನ್ ಸಭಾಂಗಣದಲ್ಲಿ ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023 ಕಾರ್ಯಕ್ರಮ ಉದ್ಘಾಟಿಸುವರು. ಮಧ್ಯಾಹ್ನ 1 ಗಂಟೆಗೆ ನಗರದ ಹೋಟೆಲ್ ತಾಜ್ ವಿವಂತಾದಲ್ಲಿ ವಿಶ್ರಾಂತಿ ಪಡೆಯುತ್ತಾರೆ. 1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಸಂಜೆ 5.25ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು.
ಇಂದು ರಾಜ್ಯಪಾಲ ಗೆಹ್ಲೋಟ್ ಮಂಗಳೂರಿಗೆ
