ಮಿಯ್ಯಾರು : ಮಾನಸಿಕ ಅಸ್ವಸ್ಥ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ : ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 7 ರಂದು ಮಿಯ್ಯಾರು ಗ್ರಾಮದಲ್ಲಿ ಸಂಭವಿಸಿದೆ. ಸುರೇಶ ಪೂಜಾರಿ (48) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಕೆಲವು ವರ್ಷಗಳಿಂದ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಗುರುವಾರದಂದು ಬೆಳಿಗ್ಗೆ ತಮ್ಮ ಮನೆಯ ದೇವರ ಕೋಣೆಯ ಪಕ್ಕಾಸಿಗೆ ಶಾಲನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಾಯಿಲೆ ಅಥವಾ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಈ ಕುರಿತು ಅವರ ತಾಯಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.













































































































































































error: Content is protected !!
Scroll to Top