ಮುದ್ರಾಡಿ ಶಾಲೆಯಲ್ಲಿ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ

ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆ – ವಸಂತಿ ಪೂಜಾರಿ

ಹೆಬ್ರಿ : ಶೈಕ್ಷಣಿಕ ವ್ಯವಸ್ಥೆಯಲ್ಲಿನ ಪ್ರತಿಭಾ ಕಾರಂಜಿಯಂತಹ ಸ್ಪರ್ಧೆಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತದೆ ಎಂದು ಮುದ್ರಾಡಿ ಗ್ರಾ. ಪಂ. ಅಧ್ಯಕ್ಷೆ ವಸಂತಿ ಪೂಜಾರಿ ಅಭಿಪ್ರಾಯಪಟ್ಟರು. ಅವರು ಸೆ. 8 ರಂದು ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಸನ್ಮಾನ
ಮುದ್ರಾಡಿ ಸಿಆರ್‌ಪಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಪ್ರತಿಮಾ ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶ್ರೀನಿವಾಸ ಭಟ್ ಅವರನ್ನು ಇದೇ ಸಂದರ್ಭ ಸನ್ಮಾನಿಸಲಾಯಿತು. ಹೇಮಲತಾ ಸೋಮೇಶ್ವರ ಪೇಟೆ ಮತ್ತು ಸೌಮ್ಯ ನಾಡ್ಪಾಲು ಅಭಿನಂದನಾ ಪತ್ರ ವಾಚಿಸಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಶುಭದರ ಶೆಟ್ಟಿ ವಹಿಸಿದ್ದರು. ಪಂಚಾಯತ್‌ ಸದಸ್ಯರಾದ ಶಾಂತಾ ದಿನೇಶ್ ಪೂಜಾರಿ, ಗಣಪತಿ ಎಂ., ಕ.ರಾ.ಸ. ನೌಕರರ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ, ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ರವೀಂದ್ರ ಹೆಗ್ಡೆ, ಸಿಆರ್‌ಪಿ ಜನಾರ್ಧನ ಬೆಳಿರಾಯ, ಪ್ರೀತೇಶ್ ಕುಮಾರ್ ಶೆಟ್ಟಿ, ಕೃಷ್ಣರಾಜ್ ಭಟ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಶ್ರೀನಿವಾಸ ಭಂಡಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಸಿಆರ್‌ಪಿ ಕೃಷ್ಣರಾಜ್ ವಂದಿಸಿದರು.































































































































































error: Content is protected !!
Scroll to Top