ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರನ್ನು ನೇಮಕಗೊಳಿಸುವಂತೆ ಸುನಿಲ್ ಕುಮಾರ್ ಮನವಿ

ಕಾರ್ಕಳ : ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸ್ತ್ರೀರೋಗ ತಜ್ಞರನ್ನು ನೇಮಕ ಮಾಡುವಂತೆ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಶಾಸಕ ಸುನಿಲ್‌ ಕುಮಾರ್‌ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

ಕಾರ್ಕಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ದಿನಂಪ್ರತಿ 50 ರಿಂದ 60 ಗರ್ಭಿಣಿ ಸ್ತ್ರೀಯರು ತಪಾಸಣೆ ಒಳಗಾಗುತ್ತಿದ್ದು, ತಿಂಗಳಿಗೆ ಅಂದಾಜು 80 ರಿಂದ 100 ಹೆರಿಗೆ ಪ್ರಕರಣಗಳು ದಾಖಲಾಗುತ್ತಿವೆ. ಆದರೆ ಇಲ್ಲಿ ಸ್ತ್ರೀರೋಗ ತಜ್ಞರ ಅನುಪಸ್ಥಿತಿ ಉಂಟಾದಲ್ಲಿ ತಾಲೂಕಿನ ಗರ್ಭಿಣಿ ಸ್ತ್ರೀಯರು ಹಾಗೂ ಮಹಿಳೆಯರಿಗೆ ತುಂಬಾ ತೊಂದರೆಯಾಗಲಿದೆ. ಆದ್ದರಿಂದ ಗರ್ಭಿಣಿ ಸ್ತ್ರೀಯರಿಗೆ ಕ್ಲಪ್ತ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರಕಿಸುವ ನಿಟ್ಟಿನಲ್ಲಿ ಖಾಯಂ ಸ್ತ್ರೀರೋಗ ತಜ್ಞರನ್ನು ಕೂಡಲೇ ನೇಮಕಾತಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಹಾಗೂ ಉಡುಪಿ ಜಿಲ್ಲಾಧಿಕಾರಿಗಳಿಗೆ ಪತ್ರ ಮೂಲಕ ಮನವಿ ಮಾಡಿಕೊಂಡಿರುತ್ತಾರೆ.error: Content is protected !!
Scroll to Top