ಬಸ್ಸಿನಲ್ಲಿ ಮಹಿಳೆಗೆ ಕಿರುಕುಳ : ಯುವಕ ಸೆರೆ

ಚೀಟಿಯಲ್ಲಿ ಫೋನ್‌ ನಂಬರ್‌ ಬರೆದುಕೊಟ್ಟಿದ್ದ ಆರೋಪಿ

ಮಂಗಳೂರು : ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಮಹಿಳೆ ಜತೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನಿಂದ ಕಾಣಿಯೂರು ಕಡೆಗೆ ಬರುವ ಬಸ್ಸಿನಲ್ಲಿ ಯುವಕನೋರ್ವ ಅನುಚಿತವಾಗಿ ವರ್ತಿಸಿದ ಕುರಿತು ಮಹಿಳೆ ಟ್ವೀಟ್‌ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಟ್ವೀಟರ್ ಖಾತೆಗೆ ಟ್ಯಾಗ್‌ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡಿನ ವಿಷ್ಣಮೋಹನ್‌ ಎಂಬಾತ ಸೆರೆಯಾದ ಯುವಕ. ಅವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಹಿಳೆ ಪುತ್ತೂರಿನಿಂದ ನಿಂತಿಕಲ್ಲಿಗೆ ಬಸ್ಸಲ್ಲಿ ಸಂಜೆ ಬರುತ್ತಿರುವಾಗ ಯುವಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದ.ಸವಣೂರಿನಲ್ಲಿ ಇಳಿಯುವಾಗ ಚೀಟಿಯೊಂದರಲ್ಲಿ ಫೋನ್‌ ನಂಬರ್‌ ಬರೆದುಕೊಟ್ಟಿದ್ದ.
ಈ ಬಗ್ಗೆ ಮಹಿಳೆಯ ಟ್ವೀಟ್‌ ಆಧರಿಸಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಯುವಕ ಕೊಟ್ಟ ಫೋನ್‌ ಮೂಲಕವೇ ಅವನನ್ನು ಪೊಲೀಸರು ಬಂಧಿಸಿದ್ದಾರೆ.

error: Content is protected !!
Scroll to Top