ಫುಟ್ಬಾಲ್ : ಜೇಸೀಸ್‌ ಶಾಲೆಯ 26 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಪಂಚಾಯತ್, ಬ್ರಹ್ಮಾವರ ವಲಯ ಕ್ಷೇತ್ರ ಸಂಪನ್ಮೂಲ ಶಿಕ್ಷಣಾಧಿಕಾರಿಯವರ ಕಚೇರಿ ಮತ್ತು ಮಣಿಪಾಲ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 17ರ ವಯೋಮಿತಿಯ ಬಾಲಕಿಯರ ತಂಡ ಪ್ರಥಮ, 14 ವಯೋಮಿತಿಯ ಬಾಲಕರ ತಂಡ ಪ್ರಥಮ ಮತ್ತು 17ರ ವಯೋಮಿತಿಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು 26 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ ಹಾಗೂ ದೈಹಿಕ ಶಿಕ್ಷಕ ಪ್ರತಾಪ್ ಅಭಿನಂದಿಸಿದ್ದಾರೆ.error: Content is protected !!
Scroll to Top