ಕಾರ್ಕಳ : ಕಾರ್ಕಳ ತಾಲೂಕು ಕುಲಾಲ ಸುಧಾರಕ ಸಂಘದ 28ನೇ ವಾರ್ಷಿಕ ಮಹಾಸಭೆ ಸೆ. 10 ರಂದು ಕುಕ್ಕುಂದೂರು ಜೋಡುರಸ್ತೆಯ ಕುಲಾಲ ಸಭಾಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ನೆರವೇರಲಿದೆ. 10 ಗಂಟೆಗೆ ಸಂಘದ ಅಧ್ಯಕ್ಷ ಭೋಜ ಕುಲಾಲ್ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸೆ. 10 : ಕುಲಾಲ ಸುಧಾರಕ ಸಂಘದ 28ನೇ ವಾರ್ಷಿಕ ಸಭೆ
