ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಎಸ್‌ಎನ್‌ವಿ ಪದವಿ ಪೂರ್ವ ಕಾಲೇಜಿನಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಇದೇ ಪಂದ್ಯಾಟದಲ್ಲಿ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಕಾಲೇಜಿನ ವಿದ್ಯಾರ್ಥಿಗಳಾದ ವರುಣ್, ಅವಿನಾಶ್ ಹಾಗು ಶ್ರೀನೀತ್ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು, ತರಬೇತುದಾರರು ಅಭಿನಂದಿಸಿದ್ದಾರೆ.
ವಾಲಿಬಾಲ್ ಪಂದ್ಯಾಟ : ಎಸ್‌ಎನ್‌ವಿ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ
