ನಾಳೆ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಬಂದ್‌

ಶಕ್ತಿ ಯೋಜನೆಯಿಂದ ನಷ್ಟ ಎಂದು ಖಾಸಗಿ ವಾಹನ ಮಾಲಕರ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮಧ್ಯರಾತ್ರಿಯಿಂದ ಖಾಸಗಿ ಸಾರಿಗೆ ವಾಹನಗಳ ಸೇವೆ ಸ್ಥಗಿತಗೊಳ್ಳಲಿದೆ. ಖಾಸಗಿ ಸಾರಿಗೆ ಒಕ್ಕೂಟದ ಬಂದ್​ ಕರೆಗೆ 36 ಖಾಸಗಿ ಸಾರಿಗೆ ಸಂಘಟನೆಗಳು ಬೆಂಬಲ ನೀಡಿವೆ. ಭಾನುವಾರ ಮಧ್ಯರಾತ್ರಿ 12 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12ರವರೆಗೆ ಖಾಸಗಿ ಸಾರಿಗೆಗಳು ಬೆಂಗಳೂರಲ್ಲಿ ಸಂಚರಿಸುವುದಿಲ್ಲ. ನಾಳೆ ಬೆಳಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್​​ವರೆಗೆ ಮೆರವಣಿಗೆ ನಡೆಯಲಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮ ಹೇಳಿದ್ದಾರೆ.
ರಾಮನಗರ, ಮೈಸೂರು, ಕನಕಪುರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆಯಿಂದ ಖಾಸಗಿ ಬಸ್ ಮಾಲೀಕರು ತಮ್ಮ ಬಸ್ಸುಗಳ ಮೂಲಕ ಬರುತ್ತಿದ್ದಾರೆ. ಬೆಂಗಳೂರಿನ ಮೂಲೆ ಮೂಲೆಗಳಿಂದ, ಎಲೆಕ್ಟ್ರಾನಿಕ್ ಸಿಟಿ, ನೆಲಮಂಗಲ, ಕೆಂಗೇರಿ, ಹೆಬ್ಬಾಳ, ಕೆ.ಆರ್ ಪುರಂ, ಚಾಲಕರು ಬರುತ್ತಿದ್ದಾರೆ. ಈ ಮೆರವಣಿಗೆಯಲ್ಲಿ 5 ಸಾವಿರ ಜನಸೇರಲಿದ್ದಾರೆ. ಸೋಮವಾರ 7 ರಿಂದ 10 ಲಕ್ಷ ವಾಹನಗಳು ಸಂಚಾರ ಮಾಡಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನ ಶಕ್ತಿ ಯೋಜನೆಯಿಂದ ಖಾಸಗಿ ವಾಹನಗಳಿಗೆ ದೊಡ್ಡ ಹೊಡೆತ ಬಿದ್ದಿದ್ದು, ಇದರ ಪರಿಹಾರಕ್ಕಾಗಿ ಖಾಸಗಿ ಸಾರಿಗೆ ವಾಹನಗಳು ಬಂದ್‌ ನಡೆಸಲಿವೆ.
ಐಟಿಬಿಟಿ ಕಂಪನಿಗಳು ವರ್ಕ್ ಫ್ರಂ ಹೋಂ ಕೊಟ್ಟಿವೆ, ಶಾಲೆಗಳು ರಜೆ ಘೋಷಣೆ ಮಾಡಿವೆ. ಸಚಿವರು ಇವತ್ತು ರಾತ್ರಿಯೊಳಗೆ ಲಿಖಿತ ರೂಪದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಬಂದ್ ವಾಪಸ್ ಪಡೆದುಕೊಳ್ಳುತ್ತೇವೆ. ಯಾವುದೇ ಸರ್ಕಾರ ಇದ್ದರೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಓಲಾ ಉಬರ್ ಮಾಲೀಕರು ಚಾಲಕರ ಸಂಘ ಅಧ್ಯಕ್ಷ ಬಂದ್‌ ಬೆಂಬಲಿಸಿದೆ. ಹೀಗಾಗಿ ನಾಳೆ ಬೆಳಗ್ಗೆ ಕಚೇರಿ ಮತ್ತಿತರ ನಿತ್ಯ ಕಾರ್ಯಗಳಿಗೆ ತೆರಳುವವರಿಗೆ ತೀವ್ರ ತೊಂದರೆಯಾಗಲಿದೆ.error: Content is protected !!
Scroll to Top