ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಮುದ್ರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಅಮೃತ ಭಾರತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವಿಜೇತ ವಿದ್ಯಾರ್ಥಿಗಳಿಗೆ ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷ ಶೈಲೇಶ್ ಕಿಣಿ, ಮುಖ್ಯ ಶಿಕ್ಷಕಿ ಶಕುಂತಲಾ, ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
ವಾಲಿಬಾಲ್ : ಅಮೃತ ಭಾರತಿಯ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ
