ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಾಗೂ ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್‌ಕಿಂಗ್ ವಿದ್ಯಾ ಸಂಸ್ಥೆಯ ಐವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ನೇಹಾ ವಿ, ದಿಶಾ ಡಿ’ಮೆಲ್ಲೊ, ಡೆನಿಕಾ ಕುಂದರ್ (10 ನೇ ತರಗತಿ), ಸಾನ್ವಿ ಎಂ. ನಾಯಕ್ (7ನೇ ತರಗತಿ), ಫಿಯೋನ ಪಿಂಟೊ (6ನೇ ತರಗತಿ) ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳೂ. ಇವರು ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಇದೇ ಪಂದ್ಯಾಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳಾದ ಆಯುಶ್ರೀ (7ನೇ ತರಗತಿ), ಸಾಕ್ಷಿತ್ ಪಿ. ಜೈನ್ (6ನೇ ತರಗತಿ), ರವೀನ (10ನೇ ತರಗತಿ) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಕಾಶ್ ನಾಯ್ಕ್ ಹಾಗೂ ಲಾವಣ್ಯ ಶೆಟ್ಟಿ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದರು.