ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ, ಖಾಸಗಿ ಬಸ್ ಗಳ ನಷ್ಟ ತುಂಬಿಕೊಡಲು ಆಗಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು : ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟದಿಂದ ಇಂದು ಬೆಂಗಳೂರು ಬಂದ್ ನಡೆಸಲಾಗುತ್ತಿದೆ. ಆಟೋ, ಕ್ಯಾಬ್, ಸೇರಿದಂತೆ ಸಾವಿರಾರು ಖಾಸಗಿ ವಾಹನಗಳು ರಸ್ತೆಗೆ ಇಳಿದಿಲ್ಲ. ಇದರಿಂದಾಗಿ ಕೆಲವೆಡೆ ಪ್ರಯಾಣಿಕರು ಪರದಾಡುವಂತಾಯಿತು.
ಈ ಬಂದ್ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಖಾಸಗಿ ಬಸ್ನವರು ನಷ್ಟ ಎನ್ನುತ್ತಿದ್ದಾರೆ. ಆ ನಷ್ಟವನ್ನು ತುಂಬಿಕೊಡಿ ಎಂಬ ಬೇಡಿಕೆಯನ್ನು ಸರಕಾರದ ಮುಂದಿಟ್ಟಿದ್ದಾರೆ. ಖಾಸಗಿಯವರಿಗೆ ಆಗುವ ನಷ್ಟ ತುಂಬಿಕೊಡಲು ಆಗಲ್ಲ. ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ಬಂದ್ ಮಾಡಲು ಎಲ್ಲರಿಗೂ ಹಕ್ಕಿದೆ. ಪ್ರತಿಭಟನೆ ಮಾಡಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ, ಯಾವುದೇ ತೊಂದರೆಯಾಗದೆ ಶಾಂತಯುತವಾಗಿ ಪ್ರತಿಭಟನೆ ಮಾಡಲಿ ಎಂದು ಅವರು ತಿಳಿಸಿದ್ದಾರೆ.
ಮತ್ತೊಂದೆಡೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಖಾಸಗಿ ಸಾರಿಗೆ ಒಕ್ಕೂಟಗಳಿಂದ ನಡೆಸಲಾಗುತ್ತಿರುವ ಬಂದ್ ರಾಜಕೀಯ ಪ್ರೇರಿತವಾಗಿದ್ದು, ಹೋರಾಟ ಮಾಡುವ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ.

error: Content is protected !!
Scroll to Top