ಕಾರ್ಕಳ : ರೋಟರಿ ಕ್ಲಬ್ ಮತ್ತು ರೋಟರ‍್ಯಾಕ್ಟ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಹಬ್ಬದ ಪ್ರಯುಕ್ತ ಸೆ. 10 ರಂದು ಪೆರ್ವಾಜೆ ಸುಂದರ ಪುರಾಣಿಕ ಸರಕಾರಿ ಪ್ರೌಢಶಾಲೆಯಲ್ಲಿ ಮುದ್ದುಕೃಷ್ಣ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ ಜರುಗಿತು. ವಿಜೇತ ವಿದ್ಯಾರ್ಥಿಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನವನ್ನು ರೇಖಾ ಉಪಾಧ್ಯಾಯ ವಿತರಿಸಿದರು. ಹರಿಪ್ರಕಾಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ರೋಟರ‍್ಯಾಕ್ಟ್ ಕ್ಲಬ್ ಅಧ್ಯಕ್ಷ ನಿಶ್ಚಿತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಸುನಿಲ್, ಕ್ಲಬ್ ಸದಸ್ಯರಾದ ಇಕ್ಬಾಲ್ ಅಹಮದ್, ಮಧುಕರ್ ಹೆಗ್ಡೆ ಉಪಸ್ಥಿತರಿದ್ದರು.
ರೋಟರಿ ಮತ್ತು ರೋಟರ‍್ಯಾಕ್ಟ್ ವತಿಯಿಂದ ಮುದ್ದುಕೃಷ್ಣ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆ
