ಪಡುಕುತ್ಯಾರು ಮಠದಲ್ಲಿ ವಿಶ್ವಕರ್ಮ ಐಕ್ಯತೆಯ ಧ್ವಜ ಬಿಡುಗಡೆ

ಪಡುಕುತ್ಯಾರು : ವಿಶ್ವಕರ್ಮ ಸಮಾಜದ ಐಕ್ಯತೆಯ ಮತ್ತು ಸಂಘಟನೆ ಪ್ರತೀಕವಾಗಿ ವಿಶ್ವಕರ್ಮ ಧ್ವಜವು ಮೂಡಿಬರಲಿ ಎಂದು ವಿಶ್ವಬ್ರಾಹ್ಮಣ ಕುಲಗುರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರಿಗೆ ಹಸ್ತಾಂತರಿಸುವುದರ ಮೂಲಕ ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ದೇವಸ್ಥಾನದ ಧರ್ಮದರ್ಶಿಗಳು, ವಿದ್ವಾಂಸರುಗಳು, ವೈದಿಕ ಮುಖಂಡರು, ವಿವಿಧ ಸಂಘಟನೆಯ ಮುಖಂಡರುಗಳೊಂದಿಗೆ ಸಭೆಗಳಲ್ಲಿ ಒಮ್ಮತ ಅಭಿಪ್ರಾಯದಿಂದ ವಿಶ್ವಕರ್ಮ ಧ್ವಜ ರೂಪುಗೊಂಡಿದೆ. ಇನ್ನಷ್ಟು ಅಭಿಪ್ರಾಯಗಳು ಬಂದಲ್ಲಿ ಸೂಕ್ತವೆನಿಸಿದಲ್ಲಿ ಪರಿಗಣಿಸುವ ಮುಕ್ತ ಅಭಿಪ್ರಾಯವೂ ಧ್ವಜ ಸಮಿತಿಗೆ ಇದೆ ಎಂದವರು ನುಡಿದರು.

ಧ್ವಜದ ರೂಪು-ರೇಶೆ
ವಿಶ್ವಕರ್ಮ ಧ್ವಜದಲ್ಲಿ ಆರು ಬಣ್ಣಗಳಿವೆ. ಇದರಲ್ಲಿ ಐದು ಬಣ್ಣಗಳು ವಿಶ್ವಕರ್ಮನ ಸಾಕಾರ ರೂಪದ ಐದು ಮುಖಗಳ ಬಣ್ಣವನ್ನು ಹೊಂದಿದೆ. ಐದು ಮುಖಗಳಾದ ಸದ್ಯೋಜಾತ- ಬಿಳಿ, ವಾಮದೇವ- ಕಪ್ಪು, ಅಘೋರ- ಕೆಂಪು, ತತ್ಪುರಷ- ಹಳದಿ , ಈಶಾನ- ಹಸುರು ಹಾಗೂ ಆರನೇ ಬಣ್ಣವು ಶರೀರ- ಹೇಮವರ್ಣ( ಚಿನ್ನದ ಬಣ್ಣ)ವನ್ನು, ಪ್ರಕೃತಿಯ ಪೂರ್ಣ ರೂಪವಾದ ಭೂಮಿಯನ್ನು ಪಂಚಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಭೂಮಿಯ ಮೇಲೆ ಜ್ಞಾನದ ಸಂಕೇತವಾದ ಓಂಕಾರದ ಲಾಂಛನವನ್ನು ಹೊಂದಿದೆ. ಕತ್ತಲೆಯಿಂದ ಬೆಳಕಿನೆಡೆಗೆ ಎನ್ನುವ ಜ್ಞಾನ ಸಂದೇಶವನ್ನೂ ನೀಡುತ್ತದೆ.

ಮಹಾಸಂಸ್ಥಾನದ ಆಸ್ಥಾನ ವಿದ್ವಾಂಸ ವೇ. ಬ್ರ. ಶ್ರೀ ಶಂಕರಾಚಾರ್ಯ ಕಡ್ಲಾಸ್ಕರ್‌, ಧ್ವಜ ಸಮಿತಿಯ ಸಂಚಾಲಕ ಯೋಗಾಚಾರ್ಯ ಪುಂಡರಿಕಾಕ್ಷ ಬೆಳ್ಳೂರು, ಪ್ರತಿಷ್ಠಾನದ ಕೋಶಾಧಿಕಾರಿ ಅರವಿಂದ ವೈ. ಆಚಾರ್ಯ ಬೆಳುವಾಯಿ, ಅಸೆಟ್ ಅಧ್ಯಕ್ಷ ಬಿ. ಸೂರ್ಯಕುಮಾರ ಹಳೆಯಂಗಡಿ, ಮಾತೃ ಮಂಡಳಿ ಅಧ್ಯಕ್ಷೆ ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಗೌರವಾಧ್ಯಕ್ಷ ಪಿ. ವಿ. ಗಂಗಾಧರ ಆಚಾರ್ಯ ಉಡುಪಿ, ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಪಂಚಾಸಿಂಹಾಸನ ಸರಸ್ವತೀ ಪೀಠ ವಿಕಾಸ ಸಮಿತಿ ಗಂಗಾವತಿಯ ಅಧ್ಯಕ್ಷ ದಿನೇಶ್ ಆಚಾರ್ಯ ಪಡುಬಿದ್ರಿ, ವೇ.ಬ್ರ ಶ್ರೀ ಸುಬ್ಬಣ್ಣಾಚಾರ್ಯ ಗಿಣಿಗೇರಿ, ಕಾಳಿಕಾಂಬಾ ದೇವಾಲಯಗಳ ಧರ್ಮಧರ್ಶಿಗಳಾದ ಕಳಿ ಚಂದ್ರಯ್ಯ ಆಚಾರ್ಯ, ಉಪ್ರಳ್ಳಿ, ಕೆ. ಸುಂದರ ಆಚಾರ್ಯ ಕೋಟೆಕಾರು, ಮಧುಕರ ಚಂದ್ರಶೇಖರ ಆಚಾರ್ಯ ಗೋಕರ್ಣ, ಶಿಲ್ಪಿ ರಾಮಚಂದ್ರ ಆಚಾರ್ಯ ಕಾರ್ಕಳ, ಜನಾರ್ದನ ಆಚಾರ್ಯ ಆರಿಕ್ಕಾಡಿ, ಎ. ಶೇಖರ ಆಚಾರ್ಯ ಕಾಪು, ಬೆಳಪು ಬಾಲಕೃಷ್ಣ ಆಚಾರ್ಯ ಕಟಪಾಡಿ, ಬಿ. ಎಂ. ಯದುನಂದನ ಆಚಾರ್ಯ ಬಂಗ್ರಮಂಜೇಶ್ವರ, ಬೆಳುವಾಯಿ ಸುಂದರ ಆಚಾರ್ಯ ಮಂಗಳೂರು, ತ್ರಾಸಿ ಸುಧಾಕರ ಆಚಾರ್ಯ, ಡಾ. ಬಾಲಕೃಷ್ಣ ಹೊಸಂಗಡಿ, ಡಾ. ಗೋಪಾಲಕೃಷ್ಣ ಆಚಾರ್ಯ ನವದೆಹಲಿ, ಡಾ. ವಿ.ಪಿ. ರಾಘವನ್ ಕಣ್ಣೂರು, ರೂಪೇಶ್ ಆಚಾರ್ಯ ಶಿರ್ವ, ಗುರುರಾಜ್ ಕೆ. ಜೆ. ಮಂಗಳೂರು, ಸುರೇಶ್ ಆಚಾರ್ಯ ನಿಟ್ಟೆ, ಬಂಬ್ರಾಣ ಯಜ್ಞೇಶ ಆಚಾರ್ಯ ಮಂಗಳೂರು, ರಮಾ ನವೀನ್ ಆಚಾರ್ಯ, ದಿನೇಶ್ ಆಚಾರ್ಯ ಕಿನ್ನಿಗೊಳಿ, ಗಣೇಶ್‌ ಆಚಾರ್ಯ ಕೋಟ, ಯೋಗೀಶ್ ಆಚಾರ್ಯ ಕರಂಬಳ್ಳಿ, ಕೆಮ್ಮಣ್ಣು ಗಣೇಶ ಆಚಾರ್ಯ, ವಿವೇಕ್‌ ಆಚಾರ್ಯ ಮಂಚಕಲ್‌, ವೈ. ಧರ್ಮೇಂದ್ರ ಆಚಾರ್ಯ ಕಾಸರಗೋಡು, ಪೆರ್ಣೆ ಕೆ.ಎಂ. ಮಧುಸೂದನ ಆಚಾರ್ಯ ಕಾಸರಗೋಡು, ಯೋಗೀಶ್ ಆಚಾರ್ಯ ಕೊಯಂಮತ್ತೂರು, ರಾಘವೇಂದ್ರ ಆಚಾರ್ಯ ಉಡುಪಿ, ಜಯಕರ ಆಚಾರ್ಯ ಕರಂಬಳ್ಳಿ, ರತ್ನಾಕರ ಆಚಾರ್ಯ ಉದ್ಯಾವರ, ಜನಾರ್ದನ ಆಚಾರ್ಯ ಕನ್ಯಾನ, ವಾದಿರಾಜ ಆಚಾರ್ಯ ಮಂಗಳೂರು, ಸತೀಶ್ ಆಚಾರ್ಯ ಸುರುಳಿ, ಚಂದ್ರಶೇಖರ ಆಚಾರ್ಯ ಬೆಂಗಳೂರು ಮತ್ತು ಹಲವಾರು ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು. ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಎಂ.ಬಿ. ಆಚಾರ್‌ ಕಂಬಾರು ಪ್ರಾಸ್ಥಾವಿಕ ಮಾತುಗಳನ್ನಾಡಿ, ಲೋಲಾಕ್ಷ ಶರ್ಮಾ ಕಾರ್ಯಕ್ರಮ ನಿರೂಪಿಸಿದರು.









































































































































































error: Content is protected !!
Scroll to Top