ಚುನಾವಣಾ ಸಲಹೆಗಾರ ಕಾನುಗೋಲು ಸಿಎಂ ಸಲಹೆಗಾರನಾಗಿ ನೇಮಕ

ವಿಧಾನಸಭೆ ಚುನಾವಣೆ ಗೆಲ್ಲಲು ರಣತಂತ್ರ ರೂಪಿಸಿದ್ದ ಕಾನುಗೋಲು

ಬೆಂಗಳೂರು: ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್‌ ಮಾಡಿದ್ದ ಪೇಸಿಎಂನಂಥ ಹೋರಾಟಗಳನ್ನು ರೂಪಿಸಿದ್ದ ಚುನಾವಣಾ ತಂತ್ರಗಾರ ಸುನಿಲ್‌ ಕಾನುಗೋಲು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ನೇಮಿಸಲಾಗಿದೆ. ಸುನಿಲ್ ಕಾನುಗೋಲುಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ನೇಮಿಸಲಾಗಿದ್ದು, ಶೀಘ್ರವೇ ನೇಮಕಾತಿ ಆದೇಶ ಹೊರಬೀಳಲಿದೆ.
ವಿಧಾನಸಭೆ ಚುನಾವಣೆಯಲ್ಲಿ ಕಾನುಗೋಲು ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಹಿಂದಿನ ಬಿಜೆಪಿ ಸರ್ಕಾರವನ್ನು ಸಮರ್ಥವಾಗಿ ಎದುರಿಸಲು ಅವರು ಕಾಂಗ್ರೆಸ್ ಪಕ್ಷಕ್ಕೆ ಚುನಾವಣಾ ತಂತ್ರಗಾರಿಕೆಯಲ್ಲಿ ಸಹಾಯ ಮಾಡಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಅವರ ನೆರವು ಪಡೆಯಲು ಪಕ್ಷದ ರಾಜ್ಯ ಘಟಕ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್‌ ಹೊಂದಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಕಂಡು ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು. ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಪ್ರದರ್ಶನ ನೀಡಿದ ಕಾಂಗ್ರೆಸ್ ರಾಜ್ಯದಲ್ಲಿ ತನ್ನ ಗೆಲುವಿನ ಗತಿಯನ್ನು ಕಾಯ್ದುಕೊಳ್ಳಲು ಉತ್ಸುಕವಾಗಿದೆ.









































































































































































error: Content is protected !!
Scroll to Top