90 ಲ.ರೂ. ಮೌಲ್ಯದ ಅಂಬರ್‌ಗ್ರೀಸ್‌ ವಶ: ಮೂವರ ಬಂಧನ

ಮಂಗಳೂರು: ಸಿಸಿಬಿ ಪೊಲೀಸರು ಪಣಂಬೂರಿನಲ್ಲಿ ಸುಮಾರು 90 ಲ.ರೂ. ಮೌಲ್ಯದ ಅಂಬರ್ ಗ್ರೀಸ್ ವಶಪಡಿಸಿಕೊಂಡಿದ್ದಾರೆ. ಅಂಬರ್‌ಗ್ರೀಸ್‌ ಅಥವಾ ತಿಮಿಂಗಿಲ‌ವಾಂತಿ ಮಾರಾಟ ಮಾಡಲು ಮೂವರು ಪ್ರಯತ್ನಿಸುತ್ತಿದ್ದಾರೆಂಬ ಸುಳಿವು ಸಿಕ್ಕಿದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಂಬರ್‌ಗ್ರೀಸ್‌ ಸಮೇತ ಮೂವರನ್ನು ಸೋಮವಾರ ಬಂಧಿಸಿದ್ದಾರೆ.
ಉಡುಪಿ ಜಿಲ್ಲೆ ಸಾಲಿಗ್ರಾಮ ಗ್ರಾಮದ ಜಯಕರ (39), ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆದಿತ್ಯ (25), ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಲೋಹಿತ್ ಕುಮಾರ್ ಗುರಪ್ಪನವರ್ (39) ಸೆರೆಯಾಗಿರುವ ಆರೋಪಿಗಳು. ಬಂಧಿತರಿಂದ 90 ಲಕ್ಷ ರೂ. ಮೌಲ್ಯದ 900ಗ್ರಾಂ ತಿಮಿಂಗಿಲ ವಾಂತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾರ್ಯಾಚರಣೆ ನಡೆಸಿದ ವೇಳೆ ಆರೋಪಿಗಳು ರೆಡಿ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.error: Content is protected !!
Scroll to Top