ಈಜು ಸ್ಪರ್ಧೆ : ಕ್ರೈಸ್ಟ್‌ಕಿಂಗ್‌ನ ಗಗನ್‌ ಭಟ್‌ ರಾಜ್ಯಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಮಣಿಪಾಲ ಟಿ.ಎ.ಪೈ ಆಂಗ್ಲ ಮಾಧ್ಯಮ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗಗನ್ ಭಟ್ (9ನೇ ತರಗತಿ) 200 ಮೀ ಫ್ರೀ ಸ್ಟೈಲ್‌ನಲ್ಲಿ ಪ್ರಥಮ ಹಾಗೂ 100 ಮೀ ಫ್ರೀ ಸ್ಟೈಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಇದೇ ಪಂದ್ಯಾಟದಲ್ಲಿ ಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಗಳಾದ ಶೈನಿ ಡಿಸೋಜಾ 50ಮೀ ಬ್ಯಾಕ್ ಸ್ಟ್ರೋಕ್‌ನಲ್ಲಿ ತೃತೀಯ, 50ಮೀ ಫ್ರೀ ಸ್ಟೈಲ್‌ನಲ್ಲಿ ತೃತೀಯ, 100 ಮೀ ಫ್ರೀ ಸ್ಟೈಲ್‌ನಲ್ಲಿ ದ್ವಿತೀಯ ಹಾಗೂ ಶಾನ್ ಡಿಸೋಜಾ 100 ಮೀ ಫ್ರೀ ಸ್ಟೈಲ್‌ನಲ್ಲಿ ತೃತೀಯ, 50ಮೀ ಫ್ರೀ ಸ್ಟೈಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಪ್ರಸಾದ್ ಹಾಗೂ ಪ್ರಕಾಶ್ ನಾಯ್ಕ್ ತಂಡದ ನೇತೃತ್ವ ವಹಿಸಿದ್ದರು.































































































































































error: Content is protected !!
Scroll to Top