ಆನ್‌ಲೈನ್‌ನಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ನೋಂದಣಿ
ಉಡುಪಿ: ರಾಜ್ಯ ಸರಕಾರದ ಆದೇಶದಂತೆ ಉಡುಪಿ ಜಿಲ್ಲೆಯಲ್ಲಿ ಕೂಡ ಪೀಠಿಕೆ ಓದುವ ಕಾರ್ಯಕ್ರಮ ಸೆ.15ರಂದು ಆಯೋಜಿಸಲಾಗಿದ್ದು, ಜಿಲ್ಲೆಯಲ್ಲಿ ಸುಮಾರು 5 ಸಾವಿರ ಮಂದಿ ಏಕಕಾಲದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಮಟ್ಟದ ಕಾರ್ಯಕ್ರಮ ಸೆ.15ರಂದು ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಎಲ್ಲ ಸರಕಾರಿ ಕಚೇರಿ, ಕೈಗಾರಿಕಾ ಕೇಂದ್ರಗಳಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಕೂಡ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಸಂವಿಧಾನ ಪೀಠಿಕೆಯನ್ನು ಸಾರ್ವಜನಿಕವಾಗಿ ಓದಲಾಗುವುದು. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘ ಸಂಸ್ಥೆಗಳು, ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿ ಕಾರ್ಯಕ್ರಮದ ಫೋಟೊ ಅಪ್ಲೋಡ್ ಮಾಡಿ ಪ್ರಮಾಣಪತ್ರವನ್ನು ಪಡೆಯಬಹುದು. ಈಗಾಗಲೇ ಆನ್‌ಲೈನ್ ಮೂಲಕ 1 ಲಕ್ಷಕ್ಕೂ ಅಧಿಕ ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.