ತಾಲೂಕು ಮಟ್ಟದ ಸಸ್ಯ ಶ್ಯಾಮಲಾ ಕಾರ್ಯಕ್ರಮ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ತಾಲ್ಲೂಕು ಮಟ್ಟದ ಸಸ್ಯ ಶ್ಯಾಮಲಾ ಕಾರ್ಯಕ್ರಮ ಕಾಬೆಟ್ಟು ಸ.ಹಿ.ಪ್ರಾ. ಶಾಲಾ ಮೈದಾನದಲ್ಲಿ ಸೆ. 11 ರಂದು ಜರುಗಿತು. ಶಾಸಕ ಸುನಿಲ್ ಕುಮಾರ್‌ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸಮೃದ್ಧ ಪರಿಸರವಿದ್ದಾಗ ಮಾತ್ರ ಸ್ವಾಸ್ಥ್ಯ ಸಮಾಜ ರೂಪುಗೊಳ್ಳಲು ಸಾಧ್ಯ. ಎಳವೆಯಲ್ಲೇ ಪರಿಸರ ಜಾಗೃತಿಯನ್ನು ಮೈಗೂಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ತಹಶಿಲ್ದಾರ್‌ ಅನಂತಶಂಕರ ಬಿ., ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ್‌ ಎಂ. ಎನ್‌, ಕ್ಷೇತ್ರ ಶಿಕ್ಷಣಾಧಿಕಾರಿ ಭಾಸ್ಕರ್ ಟಿ., ಪುರಸಭಾ ಸದಸ್ಯೆ ರೆಹಮತ್ ಎನ್‌. ಶೇಕ್, ನವೀನ್ಚಂದ್ರ ಶೆಟ್ಟಿ, ವೈಕುಂಠ ಶೆಣೈ, ವಿದ್ಯಾಲಕ್ಷ್ಮಿ, ಸಂತೋಷ್ ಕುಮಾರ್ ಶೆಟ್ಟಿ, ಮುಖ್ಯ ಶಿಕ್ಷಕಿ ಇಂದಿರಾ, ಸುಧಾಕರ್, ರವಿಚಂದ್ರ ಕಾರಂತ್, ಅಬ್ದುಲ್ ಆರೀಸ್, ಅರಣ್ಯ ಇಲಾಖಾ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.









































































































































































error: Content is protected !!
Scroll to Top