ವಿಜ್ಞಾನ ವಿಚಾರಗೋಷ್ಟಿ ಸ್ಪರ್ಧೆ – ಬೈಲೂರು ಹೈಸ್ಕೂಲಿನ ಸಾಂಜಲಿ ರಾಜ್ಯಮಟ್ಟಕ್ಕೆ

ಕಾರ್ಕಳ : ಉಡುಪಿ ಕಡಿಯಾಳಿ ಕಮಲಾ ಬಾಯಿ ಪ್ರೌಢ ಶಾಲೆಯಲ್ಲಿ ಸೆ. 11 ರಂದು ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಟಿ ಸ್ಪರ್ಧೆಯಲ್ಲಿ ಬೈಲೂರು ಸ. ಪ. ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿ ಸಾಂಜಲಿ (9ನೇ ತರಗತಿ) ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ, ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನದೊಂದಿಗೆ ತೃತೀಯ ಸ್ಥಾನ ಪಡೆದಿರುತ್ತಾರೆ.error: Content is protected !!
Scroll to Top