ಹೊಸದಿಲ್ಲಿ : ಜೈಪುರ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 11 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇಂದು ಬೆಳಗ್ಗೆ ಈ ಅಪಘಾತ ಸಂಭವಿಸಿದೆ.
ಗುಜರಾತ್‌ನಿಂದ ಮಥುರಾಕ್ಕೆ ಹೋಗುತ್ತಿದ್ದ ಬಸ್ ಕೆಟ್ಟು ರಸ್ತೆ ಬದಿಯಲ್ಲಿ ನಿಂತಾಗ ಹಿಂದಿನಿಂದ ವಿಪರೀತ ವೇಗವಾಗಿ ಬರುತ್ತಿದ್ದ ಟ್ರಕ್ ಈ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 11 ಮಂದಿ ಸ್ಥಳದಲ್ಲೇ ಸಾವಿಗೀಡಾಗಿರುವ ಮಾಹಿತಿ ಬಂದಿದೆ. ರಕ್ಷಣಾ ಕಾರ್ಯ ನಡೆಯುತ್ತಿದೆ.
ಬಸ್-ಟ್ರಕ್ ಅಪಘಾತ : 11 ಮಂದಿ ಸಾವು
