ಚೈತ್ರಾ ಕುಂದಾಪುರಗೆ 10 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು : ವಿಧಾನಸಭಾ ಚುನಾವಣಾ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಕುಂದಾಪುರ ಸಹಿತ 8 ಜನರ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಪಿ ಚೈತ್ರಾ ಮತ್ತು ಆಕೆಯ ಸಂಗಡಿಗರನ್ನು ಬಂಧಿಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಬುಧವಾರ ಬೆಂಗಳೂರಿನ 1ನೇ ಎಪಿಎಂಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ ಸೆ. 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವಂಚನೆಯಲ್ಲಿ ಭಾಗಿಯಾದ ಇತರ ಆರೋಪಿಗಳಾದ ಶ್ರೀಕಾಂತ್, ಗಗನ್, ರಮೇಶ್, ಪ್ರಜ್ವಲ್, ಧನ್ ರಾಜ್ ಅವರೆಲ್ಲರಿಗೂ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.































































































































































error: Content is protected !!
Scroll to Top