ಪಿಒಪಿ ಗಣಪತಿ ರಚಿಸಿದರೆ ಕ್ರಿಮಿನಲ್‌ ಕೇಸ್‌ : ಸಚಿವ ಖಂಡ್ರೆ ಎಚ್ಚರಿಕೆ

ನಿಯಮ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚನೆ

ಬೆಂಗಳೂರು : ನೀರಿನಲ್ಲಿ ಕರಗದ ಪಿಒಪಿ ಬಳಸಿ ಗಣಪತಿ ವಿಗ್ರಹಗಳನ್ನು ನಿರ್ಮಿಸಿದರೆ ಕ್ರಿಮಿನಲ್‌ ಕೇಸ್‌ ಹಾಕಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಪಿಒಪಿ ವಿಗ್ರಹಗಳು ಜಲಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಮಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದಿದ್ದಾರೆ.
ನೀರಿನಲ್ಲಿ ಕರಗದ ಪಿಒಪಿ ವಿಗ್ರಹ ರಚನೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಪರಿಸರ ಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ತಮ್ಮ ಕಚೇರಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಇಂತಹ ತಯಾರಕರಿಗೆ ಮಂಡಳಿ ನೋಟಿಸ್ ನೀಡಿದ್ದರೂ ಅವರು ಮತ್ತೆ ತಯಾರಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್ ಕೇಸ್ ಹಾಕಿ ಕ್ರಮ ಜರುಗಿಸಲು ಸೂಚನೆ ನೀಡಿದರು.

































































error: Content is protected !!
Scroll to Top