ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!

ಬೆಂಗಳೂರು : ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. ಸೆ. 13 ರಂದು ಕೇರಳದ ಗಡಿಗಳಲ್ಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ರಾಜ್ಯವು ವಿಡಿಯೋ ಕಾನ್ಫರೆನ್ಸ್ ನಡೆಸಲಿದೆ. ಇವುಗಳಲ್ಲಿ ಕೊಡಗು, ಚಾಮರಾಜನಗರ, ಮೈಸೂರು ಮತ್ತು ದಕ್ಷಿಣ ಕನ್ನಡ ಸೇರಿವೆ.

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ. ರಂದೀಪ್ ಮಾತನಾಡಿ, ನಿಪಾ ವೈರಸ್‌ನ ಲಕ್ಷಣಗಳು ಕಂಡುಬರುವ ಯಾವುದೇ ಪ್ರಕರಣಗಳನ್ನು ಪರಿಶೀಲಿಸಲು ರಾಜ್ಯವು ಈ ಪ್ರದೇಶಗಳಲ್ಲಿನ ಸಮುದಾಯ ಆರೋಗ್ಯ ಕೇಂದ್ರಗಳು (ಸಿಎಚ್‌ಸಿ) ಮತ್ತು ಸಾರ್ವಜನಿಕ ಆರೋಗ್ಯ ಕೇಂದ್ರಗಳಿಗೆ (ಪಿಎಚ್‌ಸಿ) ಆದೇಶಿಸುತ್ತದೆ. ಕ್ರಿಯಾ ಯೋಜನೆ ರೂಪಿಸಿ ಸಲಹೆ ಸೂಚನೆಯನ್ನೂ ನೀಡಲಾಗುವುದು ಎಂದರು.

ಕ್ರಿಯಾ ಯೋಜನೆ ಕೇವಲ ಗಡಿ ಜಿಲ್ಲೆಗಳಿಗೆ ಸೀಮಿತವಾಗಿರದೆ, ಇಡೀ ರಾಜ್ಯಕ್ಕೆ, ವಿಶೇಷವಾಗಿ ಸಾರಿಗೆ ಕೇಂದ್ರಗಳಿಗೆ ಸೀಮಿತವಾಗಿರುತ್ತದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 2021ರಲ್ಲಿ ಕೋಯಿಕ್ಕೋಡ್‌ನಲ್ಲಿ ಕೊನೆಯದಾಗಿ ನಿಪಾ ವೈರಸ್‌ ಕಾಣಿಸಿಕೊಂಡಿದ್ದು, ಮೈಸೂರು, ಮಂಗಳೂರು, ಚಾಮರಾಜನಗರ ಮತ್ತು ಕೊಡಗಿನಲ್ಲಿ ತೀವ್ರ ಕಟ್ಟೆಚ್ಚಕ ವಹಿಸಲಾಗಿತ್ತು. ಆ ಸಮಯದಲ್ಲಿ, ಕರ್ನಾಟಕದಲ್ಲಿ ಕೆಲವು ಶಂಕಿತ ಪ್ರಕರಣಗಳು ಪತ್ತೆಯಾಗಿದ್ದರೂ, ದೃಢಪಟ್ಟಿರಲಿಲ್ಲ.

error: Content is protected !!
Scroll to Top